ಆಗಸ್ಟ್ 11 ರಂದು ವಿವೇಕಾನಂದದಲ್ಲಿ ತಾಲೂಕು ಮಟ್ಟದ ಸ್ಪರ್ಧೆಗಳು

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯು ತನ್ನ ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದು ಆ ಪ್ರಯುಕ್ತ ತಾಲೂಕಿನ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದಿನಾಂಕ 11-8-2017  ರಂದು ಶಾಲಾ ಆವರಣದಲ್ಲಿ ವಿವಿಧ ಸಾಹಿತ್ಯಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಗಳನ್ನು ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ಎಂಬ ಎರಡು ವಿಭಾಗಗಳಲ್ಲಿ ಆಯೋಜಿಸಲಾಗುತ್ತಿದ್ದು, ಭಾಷಣ ಮತ್ತು ಪ್ರಬಂಧ, ಕವನ, ಚಿತ್ರಕಲೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಕೋಶಾಧಿಕಾರಿ ಶ್ರೀ ವಸಂತ ಸುವರ್ಣ ವಹಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಐತ್ತಪ್ಪ ನಾಯ್ಕ ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜ್ಞಾನಗಂಗಾ ಪುಸ್ತಕ ಮಳಿಗೆ ಮಾಲಕರಾದ ಶ್ರೀ ಪ್ರಕಾಶ್ ಕೊಡೆಂಕಿರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

Highslide for Wordpress Plugin