ಗುರುಪೂರ್ಣಿಮೆ

ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಗುರುಪೂರ್ಣಿಮೆ ಕಾರ್ಯಕ್ರಮ ನಡೆಯಿತು. ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಮಾತಾಜಿ ಇವರು ಗುರು- ಶಿಷ್ಯರ ನಡುವಿನ ಸಂಬಂಧವನ್ನು ಧೌಮ್ಯ ಮಹರ್ಷಿ ಮತ್ತು ಉಪಮನ್ಯುವಿನ ಕಥೆಯನ್ನು ಹೇಳುವ ಮೂಲಕ ಗುರುಪೂರ್ಣಿಮೆಯ ಮಹತ್ವವನ್ನು ತಿಳಿಸಿದರು.

Gurupoornime 1-5th Girls (2)

Gurupoornime 1-5th Girls (1)

ಮಕ್ಕಳು ಅಖಂಡ ಮಂಡಲಾಕಾರಂ ವ್ಯಾಪ್ತಂ ಯೇನ ಚರಾಚರತತ್ಪದಂ ದರ್ಶಿತಂ ಏನ ತಸ್ಮೈಶ್ರೀ ಗುರವೇ ನಮಃ ಎಂಬ ಸುಭಾಷಿತದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ದುರ್ಗಾದೇವಿ ಉಪಸ್ಥಿತರಿದ್ದರು. ಶ್ರೀಮತಿ ಶ್ವೇತಾ ಮಾತಾಜಿ ಸ್ವಾಗತಿಸಿ, ಶ್ರೀಮತಿ ಕವಿತಾ ಮಾತಾಜಿಧನ್ಯವಾದ ಸಮರ್ಪಿಸಿ, ಶ್ರೀ ರಾಜೇಶ್ ಶ್ರೀಮಾನ್ ಕಾರ್ಯಕ್ರಮ ನಿರೂಪಿಸಿದರು.

Highslide for Wordpress Plugin