ಶಾರದಾಪೂಜೆ, ಅಕ್ಷರಾಭ್ಯಾಸ

ವಿವೇಕಾನಂದಕನ್ನಡ ಮಾಧ್ಯಮ ಶಾಲೆಯಲ್ಲಿ ದಿನಾಂಕ 18-10-2018 ಗುರುವಾರದಂದು ಕುಂಟಾರು ಶ್ರೀ ಶ್ರೀಧರ ತಂತ್ರಿಯವರ ನೇತೃತ್ವದಲ್ಲಿ ಶಾರದಾಪೂಜೆ, ಅಕ್ಷರಾಭ್ಯಾಸ ಪೂಜಾ ವಿಧಿ-ವಿಧಾನಗಳನ್ನು ನೆರವೇರಿತು. ಈ ಸಂದರ್ಭದಲ್ಲಿ ಶಾರದಾ ಪೂಜೆಯ ಬಳಿಕ ಪುಟಾಣಿಗಳು ಅಕ್ಷರಾಭ್ಯಾಸದ ಮೂಲಕ ತಮ್ಮ ಜ್ಞಾನಾರಂಭಕ್ಕೆ ಶುಭ ಮುಹೂರ್ತವಿರಿಸಿದರು. ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರಿಂದ ಭಜನಾ ಕಾರ್ಯಕ್ರಮ ನೆರವೇರಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Sharada pooje (3)

Sharada pooje (1)

Sharada pooje (2)

Highslide for Wordpress Plugin