ದಿನಾಂಕ 26-05-2014 ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ, ಇಲ್ಲಿ 2013-14 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಡಾ.ಶೋಭಿತಾ ಸತೀಶ್ ರವರು ಸಂದರ್ಬೋಚಿತವಾಗಿ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು. ಶಾಲಾ ಸಂಚಾಲಕರಾದ ಶ್ರೀ. ರವೀಂದ್ರ.ಪಿ ರವರು ಮಾತನಾಡಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಭಿರ್ಮಣ್ಣ ಗೌಡ, ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ವೆಂಕಪ್ಪ ನಾಯ್ಕ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಅನೀಶ್ರವರು ಉಪಸ್ಥಿತರಿದ್ದರು. ಈ ಶೈಕ್ಷಣಿಕ ಸಾಲಿನಲ್ಲಿ 606 ಅಂಕಗಳಿಸಿ ತಾಲೂಕಿಗೆ ಪ್ರಥಮ ಸ್ಥಾನಿಯಾದ ವಿದ್ಯಾರ್ಥಿ ಚಂದನ್ ಕಲಿಕೆಗೆ ಪ್ರೇರಕರಾದ ಶಿಕ್ಷಕರನ್ನು , ಆಡಳಿತ ಮಂಡಳಿಯವರನ್ನು ಹಾಗೂ ಸಹಪಾಠಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದ ಬಳಿಕ ಶಿಕ್ಷಕರಾದ ಶ್ರೀ ವಿಠಲ ನಾಯಕ್ ಇವರಿಂದ ’ಗೀತ ಸಾಹಿತ್ಯ ಸಂಭ್ರಮ’ ಎಂಬ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸ್ವಾಗತವನ್ನು ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ ಮತ್ತು ನಿರೂಪಣೆಯನ್ನು ಶ್ರೀಮತಿ ಉಮಾ ಮೋಹನ್ ನೆರವೇರಿಸಿದರು.