ನಾದಮಯ ಜಗತ್ತಿನಲ್ಲಿರುವ ಪ್ರತಿಯೊಬ್ಬರೂ ಸಂಗೀತ ಪ್ರಿಯರೇ ಸಂಗೀತ ಮನಸ್ಸನ್ನು ಅರಳಿಸುವ ಕೆಲಸ ಮಾಡುತ್ತದೆ ಎಂದು ವಿದ್ವಾನ್ ಕಾಂಚನ ಈಶ್ವರ ಭಟ್ ಹೇಳಿದರು. ಅವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಆಶ್ರಯದಲ್ಲಿ ಸ್ವರಮಾದುರ್ಯ ಸುಗಮ ಸಂಗೀತ ಬಳಗ ದ.ಕ ಇವರ ಸಂಯೋಜನೆಯಲ್ಲಿ ದಿನಾಂಕ 21-6-2014 ೪ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಹಾಡೋಣ ಬನ್ನಿ ಪ್ರೌಢ ಶಾಲಾ ಪಠ್ಯ ಆಧಾರಿತ ಹಾಡುಗಳ ಗಾಯನ ಕಾರ್ಯಕ್ರಮದಲ್ಲಿ ಉದ್ಫಾಟಕರಾಗಿ ಆಗಮಿಸಿ ಶುಭ ಹಾರೈಸಿದರು.


ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಡಾ.ಕೃಷ್ಣ ಭಟ್ ಕೊಂಕೋಡಿ, ಸಂಚಾಲಕರಾದ ರವೀಂದ್ರ.ಪಿ ಸುಗಮ ಸಂಗೀತ ಬಳಗದ ನಿರ್ದೇಶಕರಾದ ಜನಾರ್ದನ.ಬಿ ಹಾಗೂ ಮುಖ್ಯಗುರುಗಳಾದ ಆಶಾಬೆಳ್ಳಾರೆ ಉಪಸ್ಥಿತರಿದ್ದರು. ಶಿಕ್ಷಕ ಅಜಿತ್ ಇವರು ನಿರೂಪಿಸಿ, ಸ್ವಾಗತಿಸಿ ವಂದಿಸಿದರು.