ಬೀದರ್ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ವಿದ್ಯಾಭಾರತಿ ಪ್ರಾಂತೀಯ (ರಾಜ್ಯ)ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತಿನಿಧಿಸಿದ್ದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿಶೋರ ವರ್ಗದ ಬಾಲಕಿಯರು ಪ್ರಥಮ ಸ್ಥಾನ ಗಳಿಸಿ ಆಗಸ್ಟ್ 8, 9, 10 ರಂದು ಕೇರಳದ ಪಾಲ್ಕಟ್‌ನಲ್ಲಿ ನಡೆಯುವ ದಕ್ಷಿಣ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
