ವಿವೇಕಾನಂದ ಕನ್ನಡ ಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷದ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮವು ಮೂರು ವಿಭಾಗದಲ್ಲಿ ನಡೆಯಿತು. ಕಿರಿಯ ಪ್ರಾಥಮಿಕ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಬಿರ್ಮಣ್ಣ ಗೌಡ ಸಭಾಧ್ಯಕ್ಷರಾಗಿದ್ದರು.
ಅವರು ಮಕ್ಕಳಿಗೆ ತಮ್ಮ ಉಜ್ವಲ ಭವಿಷ್ಯಕ್ಕೆ ನಿಮ್ಮಲ್ಲಿರುವ ಪ್ರತಿಭೆಯು ಪೂರಕವಾಗಿದೆ. ಅದಕ್ಕೆ ಶ್ರೀದೇವರ ಆಶೀರ್ವಾದ ಸದಾ ಇರಲಿ ಎಂದು ಹಾರೈಸಿದರು. ವೇದಿಕೆಯಲ್ಲಿ ಶಾಲಾ ಹಿರಿಯ ವಿದ್ಯಾರ್ಥಿನಿ ಕು.ದೀಪಿಕಾ ಮಾತನಾಡುತ್ತ ಅವರ ಹಳೆ ಶಾಲಾ ದಿನಗಳನ್ನು ನೆನಪಿಸಿಕೊಂಡರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ಶ್ರೀಮತಿ ವೀಣಾಸರಸ್ವತಿ ಮತ್ತು ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾದ ಅಂಬಿಕಾ ರಮೇಶ್ ಉಪಸ್ಥಿತರಿದ್ದರು.



