
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ (ಆಡಳಿತ) ದ.ಕ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ವಿಠಲ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಇವರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ 17ರ ವಯೋಮಾನದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದೆ.