ತ್ರೋಬಾಲ್ – ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಬಾಲಕರು- ಜಿಲ್ಲಾಮಟ್ಟಕ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು ಇವರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲಂದಡ್ಕ ಇಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ೧೪ ವರ್ಷದ ಒಳಗಿನ ಬಾಲಕರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೇ ಇದೇ ತಂಡ ವಿದ್ಯಾಭಾರತಿ ಕರ್ನಾಟಕ ವತಿಯಿಂದ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರಾದ ಶ್ರೀ ದಾಮೋದರ್ ಮತ್ತು ಶ್ರೀಮತಿ ಹರಿಣಾಕ್ಷಿ ತರಬೇತಿ ನೀಡಿದ್ದರು.

DSCN0933

Highslide for Wordpress Plugin