ತಾಲೂಕು ಮಟ್ಟದ ಪ್ರೌಢ ಶಾಲಾ ಕಬಡ್ಡಿ ಪಂದ್ಯಾಟ
ಕಬಡ್ಡಿ ಮಣ್ಣಿನ ಸಂಸ್ಕೃತಿ, ಇದನ್ನು ಉಳಿಸಿ ಬೆಳೆಸುವ ಎಂದು ತಾ.ಪಂ. ಅಧ್ಯಕ್ಷೆ ಪುಲಸ್ತ್ಯಾರೈ ಹೇಳಿದರು.
ಜಿ.ಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಸೆ. 10 ರಂದು ತೆಂಕಿಲ ವಿವೇಕಾನಂದ ಶಾಲೆಯ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢ ಶಾಲಾ ಮಟ್ಟದ ಕಬಡ್ಡಿ ಪಂದ್ಯಾಟವನ್ನು ಉದ್ಫಾಟಿಸಿ ಮಾತನಾಡಿದರು. ಸ್ವಾಮಿ ವಿವೇಕಾನಂದರು ಸ್ವಾತಂತ್ರ್ಯದ ಜಾಗೃತಿ ಮೂಡಿಸಲು ಧರ್ಮವೊಂದೇ ಸಾಲದು ತೋಲುಗಳಿಗೆ ಶಕ್ತಿ ಬೇಕು ಇದಕ್ಕಾಗಿ ಕಬಡ್ಡಿಗೆ ಪ್ರೋತ್ಸಾಹ ನೀಡಿದ್ದರು. ಈ ನಿಟ್ಟಿನಲ್ಲಿ ಕಬಡ್ಡಿ ಇಂದು ನಮ್ಮ ಮಣ್ಣಿನ ಸಂಸ್ಕೃತಿಯನ್ನು ಉಳಿಸುವುದಲ್ಲದೇ ದೇಶ ಭಕ್ತಿಯನ್ನು ಉದ್ದೀಪನಗೊಳಿಸಲಿದೆ ಎಂದರು. ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೃಷ್ಣ ಭಟ್ ಕೊಂಕೋಡಿ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಶಾಲಾ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ವಿನೋದ್ ಕುಮಾರ್‌ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನೀಶ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಮಾಮಚ್ಚನ್, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಜನಾರ್ಧನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ದಯಾನಂದ ರೈ, ದಾಮೋದರ್, ಶಾಲಾ ಶಿಕ್ಷಕರಾದ ವೀಣಾಸರಸ್ವತಿ, ಹರೀಶ್ ಅತಿಥಿಗಳನ್ನು ಗೌರವಿಸಿದರು. ವಿದ್ಯಾರ್ಥಿನಿ ಅರ್ಪಿತಾ ಪ್ರಾರ್ಥಿಸಿದರು. ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಸ್ವಾಗತಿಸಿದರು. ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು.
ತಾಲೂಕಿನ ಶಾಲೆಗಳ ಪೈಕಿ 40 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿತ್ತು. ಸುಮಾರು 46 ಮಂದಿ ದೈಹಿಕ ಶಿಕ್ಷಣ ಶಿಕ್ಷಕರು ತೀರ್ಪುಗಾರರಾಗಿ ಭಾಗವಹಿಸಿದ್ದರು.