ವಿವೇಕಾನಂದ ಕನ್ನಡ ಮಾಧ್ಯಮ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪುತ್ತೂರಿನ ಖ್ಯಾತ ನ್ಯಾಯವಾದಿಗಳಾದಕುಂಬ್ರ ದುರ್ಗಾಪ್ರಸಾದ್ ರೈ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ಸ್ವಾಮಿವಿವೇಕಾನಂದರು ವಿದೇಶಗಳಲ್ಲಿ ಹೆಸರುಗಳಿಸಿದ ನಂತರ ರಾಮಕೃಷ್ಣ ಪರಮಹಂಸರು ಅತ್ಯಂತ ಸಂತೋಷಪಟ್ಟರು. ಅದೇ ರೀತಿ ವಿದ್ಯಾರ್ಥಿಗಳಾದ ನೀವೆಲ್ಲರೂ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿಸಾಧನೆ ಮಾಡಿ, ಭಾರತ ದೇಶದ ಸಂಪನ್ಮೂಲಗಳಾಗಿ ಎಂದು ಹಾರೈಸಿದರು.




ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಡಾ| ಕೆ.ಎಂ. ಕೃಷ್ಣ ಭಟ್ ಕೊಂಕೋಡಿ, ಖಜಾಂಜಿ ಅಚ್ಚುತ ನಾಯಕ್, ಸದಸ್ಯೆ ರೂಪಲೇಖ ಪಾಣಾಜೆವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಗುರು ಸತೀಶ್ ರೈ ಸ್ವಾಗತಿದರು. ಕನ್ನಡ ಮಾಧ್ಯಮ ಶಾಲಾ ಮುಖ್ಯ ಗುರು ಶ್ರೀಮತಿ ನಳಿನಿ ವಾಗ್ಲೆ ಉಪಸ್ಥಿತರಿದ್ದರು. ಸಹಶಿಕ್ಷಕ ಗಣೇಶ್ ಏತಡ್ಕ ಕಾರ್ಯಕ್ರಮ ನಿರ್ವಹಿಸಿದರು.