ವಿದ್ಯಾಭಾರತಿ ದಕ್ಷಿಣ ಕನ್ನಡ ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಸುದಾನ ಒಳಾಂಗಣ ಸಾಮೆತ್ತಡ್ಕ ಇಲ್ಲಿ ನಡೆದ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಉದ್ಫಾಟಿಸಿದ ಸುದಾನ ಸ್ಪೋರ್ಟ್ಸ್ ಕ್ಲಬ್ ಸಾಮೆತ್ತಡ್ಕ ಇದರ ಅಧ್ಯಕ್ಷರಾದ ಶ್ರೀ ಭುಜಂಗ ಆಚಾರ್ಯ ಇವರು ಕಾರ್ಯಕ್ರಮವನ್ನು ಉದ್ಫಾಟಿಸಿ ಉತ್ತಮ ಭವಿಷ್ಯ ನಿರ್ಮಾಣ ಕ್ರೀಡೆಯಿಂದಲೂ ಸಾಧ್ಯ ಈ ನಿಟ್ಟಿನಲ್ಲಿ ಕ್ರೀಡಾಪಟುಗಳು ಕಠಿಣ ಅಭ್ಯಾಸದ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಸಾಧ್ಯ ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.



ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ ಅಧ್ಯಕ್ಷರಾದ ಸುರೇಶ್.ಎಂ, ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇದರ ಅಧ್ಯಕ್ಷರಾದ ನರಸಿಂಹ ಪೈ, ವಿದ್ಯಾಭಾರತಿ ದಕ್ಷಿಣಕನ್ನಡ ಜಿಲ್ಲೆ ಇದರ ದೈ.ಶಿ ಪ್ರಮುಖ ಕರುಣಾಕರ ಎಂ, ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳಾದ ಶ್ರೀಮತಿ ನಳಿನಿ ವಾಗ್ಲೆ, ದೈಹಿಕ ಶಿಕ್ಷಣ ಶಿಕ್ಷಕ ದಾಮೋದರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮಮತಾ ನಿರೂಪಿಸಿ, ವಂದಿಸಿದರು.