ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು ಸಮೂಹ ಸಂಪನ್ಮೂಲ ಕೇಂದ್ರ ಉಪ್ಪಿನಂಗಡಿ ಇದರ ಸಹಯೋಗದಲ್ಲಿ ಸೈಂಟ್ ಮೇರಿಸ್ ಮತ್ತು ಸಂತ ಫಿಲೋಮಿನಾ ವಿದ್ಯಾಸಂಸ್ಥೆ (ರಿ) ಉಪ್ಪಿನಂಗಡಿಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಗಮ್ಯ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಬನ್ನೂರು ಗಣೇಶ್ ಆಚಾರ್ಯ ಮತ್ತು ಮಂಜುಳ ಗಣೇಶ್ ದಂಪತಿಗಳ ಪುತ್ರಿ.