ದಿನಾಂಕ 29-6-2017 ರಂದು ಅಪರಾಹ್ನ 2.30 ಕ್ಕೆ 10 ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಕರೆಯಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಅಚ್ಯುತ್ ನಾಯಕರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ವಿದ್ಯಾರ್ಥಿಗಳ ಕಲಿಕೆಯ ಜೊತೆಗೆ ನಮ್ಮ ಸನಾತನ ಸಂಸ್ಕೃತಿಯನ್ನು ಪಾಲಿಸುತ್ತಾ ಮುಂದಿನ ಪೀಳಿಗೆಗೆ ಅದನ್ನು ವರ್ಗಾಯಿಸುವ ಮಹತ್ತರ ಜವಾಬ್ದಾರಿ ಇಂದಿನ ಪೋಷಕರ ಮೇಲಿದೆ ಎಂದು ಹೇಳಿದರು. ಅಲ್ಲದೆ ಅದೇ ಸಂಸ್ಕೃತಿಯ ಕಾರಣಕ್ಕೆ ಈ ಸಂಸ್ಥೆ ಸ್ಥಾಪನೆಯಾದುದು ಎಂಬುವುದನ್ನು ಔಚಿತ್ಯಪೂರ್ಣವಾಗಿ ತಿಳಿಸಿದರು.


ಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ಉಪಸ್ಥಿತರಿದ್ದು ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯಪೂರಕ ಚಟುವಟಿಕೆಗಳ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಮುಖ್ಯಗುರುಗಳು ಉಪಸ್ಥಿತರಿದ್ದರು. ಶ್ರೀಮತಿ ರೇಶ್ಮಾ ಮಾತಾಜಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಕು. ಲೀಲಾವತಿ ಮಾತಾಜಿ ವಾರ್ಷಿಕ ಯೋಜನೆಯನ್ನು ಮಂಡಿಸಿದರು.