2017-18 ನೇ ಸಾಲಿನ 5 ನೇ ತರಗತಿ ಹಾಗೂ 6 ನೇ ತರಗತಿ ಮಕ್ಕಳ ಪೋಷಕರ ಸಭೆಯನ್ನು ದಿನಾಂಕ 29-06-2017 ರಂದು ಶಾಲಾ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯು ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮೊದಲಿಗೆ ಶಿಕ್ಷಕರು ಮತ್ತು ಪೋಷಕರು ತಮ್ಮ ತಮ್ಮ ಪರಿಚಯವನ್ನು ಮಾಡಿಕೊಂಡರು. ಶಾಲೆ ಪಠ್ಯ ಹಾಗೂ ಪಠ್ಯಪೂರಕ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.



ಶಾಲಾ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆಯವರು ಮಕ್ಕಳನ್ನು ಓರ್ವ ಸತ್ಪ್ರಜೆಯಾಗಿ ಬೆಳೆಸುವಲ್ಲಿ ಹೆತ್ತವರ ಪಾತ್ರ ಮಹತ್ತರವಾದುದು ಎನ್ನುತ್ತಾ ಶಾಲೆಯಲ್ಲಿ ನಡೆಯುವ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಶ್ರೀ ಅಚ್ಯುತ ನಾಯಕ್‌ರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆ ಜನನಿ ಮೊದಲ ಗುರು ಆದಾಗ ಸಂಸ್ಕಾರವನ್ನು ಉಳಿಸಿ ಬೆಳೆಸಿಕೊಳ್ಳಲು ಸಾಧ್ಯ ಎಂದರು. ಇದಕ್ಕೆ ನಾವು ಮಾದರಿಯಾಗಬೇಕು ಎಂದು ತಿಳಿಸಿದರು. ಶ್ರೀಮತಿ ಸೌಮ್ಯಶ್ರೀ ಮಾತಾಜಿ ಸ್ವಾಗತಿಸಿ, ಶ್ರೀಮತು ಉಮಾ ಮಾತಾಜಿ ವಂದಿಸಿ ಶ್ರೀ ಹರೀಶ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.