ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯ ಹಿರಿಯ ಪ್ರಾಥಮಿಕ ವಿಭಾಗದ ಯಕ್ಷಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪರೀಕ್ಷಿತ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಿಕ್ಷಕರಾದ ಚಂದ್ರಶೇಖರ್ ಸುಳ್ಯಪದವು ಮತ್ತು ನೃತ್ಯ ಗುರುಗಳಾದ ಬಾಲಕೃಷ್ಣ ಉಡ್ಡಂಗಲ ತರಬೇತಿ ನೀಡಿರುತ್ತಾರೆ.
