ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪೇಯಿ ಅವರಿಗೆ ಶ್ರದ್ಧಾಂಜಲಿ ಸಭೆ

ಇತ್ತೀಚೆಗೆ ನಿಧನರಾದ ರಾಷ್ಟ್ರ ಕಂಡ ಅಪ್ರತಿಮ ನಾಯಕ, ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಿಪೇಯಿ ಅವರಿಗೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಾಲಾ ಅಧ್ಯಕ್ಷರಾದ ಅಚ್ಯುತ್ ನಾಯಕ್ ಹಾಡಿನ ಮೂಲಕ ಶ್ರೀಯುತರಿಗೆ ನಮನ ಸಲ್ಲಿಸಿ, ಬಳಿಕ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಗಣಪತಿ ಭಟ್ ಅವರು ವಾಜಿಪೇಯಿಯವರ ಬಾಲ್ಯ, ಜೀವನ ಮತ್ತು ಅವರ ರಾಜಕೀಯ ಜೀವನದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಮುಖ್ಯಗುರುಗಳು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಮೌನ ಪ್ರಾರ್ಥನೆ ಸಲ್ಲಿಸಿ ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

Atal Vajipee Sharaddanjali sabhe (2)

Atal Vajipee Sharaddanjali sabhe (1)

Highslide for Wordpress Plugin