ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 73ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ತುಳುನಾಡ ಕನ್‌ಸ್ಟ್ರಕ್ಷನ್‌ನಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ಶ್ರೀಯುತ ತುಷಾರ್ ಇವರು ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿ ಅಭಿರಾಮ್ ಭಟ್ ಮಾತನಾಡಿ ನಮ್ಮ ದೇಶ ಬೆಳೆದು ಬಂದ ಹಾದಿ, ಯುದ್ಧದ ಸಂದರ್ಭದಲ್ಲಿ ಭಾರತ ಮೆರೆದ ಶೌರ್ಯತೆ, ಮತ್ತು ಭಾರತ ವಿಶ್ವಗುರು ಹೇಗೆ ಆಗಬಲ್ಲದು ಎಂಬ ಬಗ್ಗೆ ಸ್ಪಷ್ಟ ಅರಿವನ್ನು ಮೂಡಿಸಿದರು.



ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯುತ್ ನಿಗಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಕೃಷ್ಣಪ್ಪ ನಾಯ್ಕರೆಂಜ, ಶ್ರೀ ಶ್ರೀನಿವಾಸ ಮೂಡಿಗೆರೆ ಮತ್ತು ಶ್ರೀ ಉಮೇಶ್ ಇವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ಸಿಬ್ಬಂದಿ ವರ್ಗ, ವಿದ್ಯಾರ್ಥಿ ವೃಂದ, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು , ಮಾತೃಭಾರತಿ ಪದಾಧಿಕಾರಿಗಳು, ಶಾಲಾ ಮುಖ್ಯಗುರುಗಳು ಉಪಸ್ಥಿತರಿದ್ದರು.
ಶಿಕ್ಷಕಿ ಶ್ರೀಮತಿ ಸೌಮ್ಯಶ್ರೀ ಸ್ವಾಗತಿಸಿ, ಶ್ರೀಮತಿ ಗೌತಮಿ ಧನ್ಯವಾದ ಗೈದು ಕಾರ್ಯಕ್ರಮವನ್ನು ಕು.ವಿದ್ಯಾಶ್ರೀ ನಿರೂಪಿಸಿದರು.