ಯೋಗಾಸನ ಸ್ಪರ್ಧೆ – ಸಮಗ್ರತಂಡ ಪ್ರಶಸ್ತಿ

ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು ನರಿಮೊಗರು ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಲಿಖಿತ್‌ಗೌಡ ಮತ್ತು ಪುನೀತ್‌ರಾಜ್‌ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಹೇಮಶ್ರೀ ಎಂ ಮತ್ತು ಸುಚಿತಾ ಕೆ. ಎಸ್‌. ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮತ್ತು ಪ್ರೌಢಶಾಲಾ ವಿಭಾಗದ ಬಾಲಕರು ಹಾಗೂ ಬಾಲಕಿಯರು ಪ್ರಥಮ ಸಮಗ್ರತಂಡ ಪ್ರಶಸ್ತಿಯನ್ನು ಪಡೆದಿರುತ್ತಾರೆ.

District Level Yoga

Highslide for Wordpress Plugin