ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ದಿನಾಂಕ 4-10-2019 ರಂದು ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಜಯರಾಮ್ ಭಟ್ ನೇತೃತ್ವದಲ್ಲಿ ಶಾರದಾ ಪೂಜೆ ಮತ್ತು ಅಕ್ಷರಾಭ್ಯಾಸ ಪೂಜಾ ವಿಧಿ – ವಿಧಾನಗಳನ್ನು ನೆರವೇರಿದವು. ಸರಸ್ವತಿ ಪೂಜೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬಳಿಕ ಅಕ್ಷರಾಭ್ಯಾಸದ ಮೂಲಕ ತಮ್ಮ ಜ್ಞಾನಾರಂಭಕ್ಕೆ ಸುಮಾರು ಪುಟಾಣಿಗಳು ಶುಭ ಮೂಹೂರ್ತವಿರಿಸಿದರು. ಮಕ್ಕಳಿಗೆ ಆರತಿ ಎತ್ತಿ ಶಾರದ ಮಾತೆಗೆ ಪುಷ್ಫ ನಮನವನ್ನು ಸಲ್ಲಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಮುಖ್ಯ ಗುರುಗಳೂ, ಶಿಕ್ಷಕ- ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.







