ವಿವೇಕಾನಂದರ ಜೀವನವೇ ನಮಗೆ ಪ್ರೇರಣೆಯಾಗಲಿ – ಶ್ರೀ ರಮೇಶ್ಚಂದ್ರ

ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀಯುತ ರಮೇಶ್ಚಂದ್ರ ನುಡಿದರು.

ವಿವೇಕಾನಂದರ ಬಾಲ್ಯ ಹಾಗೂ ಅವರ ಮೇಲೆ ಗುರು ರಾಮಕೃಷ್ಣ ಪರಮಹಂಸರ ಪ್ರಭಾವವನ್ನು ಪ್ರಹಸನದ ಮೂಲಕ ವಿದ್ಯಾರ್ಥಿಗಳು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

DSCN1974

DSCN1982

DSCN1986

ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸಂಚಾಲಕರಾದ ಶ್ರೀ ರವಿನಾರಾಯಣ, ಪ್ರಾಥಮಿಕ ಶಾಲಾ ಮುಖ್ಯಗುರು ನಳಿನಿ ವಾಗ್ಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ವಸತಿ ನಿಲಯದ ಕಾರ್ಯದರ್ಶಿ ಅಚ್ಯುತ ನಾಯಕ್, ಶಾಲಾ ಆಡಳಿತ ಮಂಡಳಿ ಸದಸ್ಯರಾದ ವಸಂತ ಸುವರ್ಣ, ಶೇಖರ್‌ ನಾರಾವಿಯವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಕು. ಪ್ರಣಮ್ಯ ಪ್ರಾರ್ಥಿಸಿ, ಕು. ಸಹನಾ ಕಾರ್ಯಕ್ರಮ ನಿರೂಪಿಸಿ, ಕು. ಅನ್ವಿತಾ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು. ಸಭಾಕಾರ್ಯಕ್ರಮದ ನಂತರದಲ್ಲಿ ವಿದ್ಯಾರ್ಥಿಗಳೆಲ್ಲರಿಗೂ ಸಹಭೋಜನವನ್ನು ಏರ್ಪಡಿಸಲಾಯಿತು.

DSCN2024

DSCN2041

DSCN1973

DSCN2005

DSCN2012

DSCN2023

Highslide for Wordpress Plugin