ಕರ್ನಾಟಕ ಸರಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಕೋಲಾರ, ಇದರ ವತಿಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾಕಾರಂಜಿ-ಕಲೋತ್ಸವ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಶಿಶಿರ್ ಎಸ್, ಕೌಶಿಕ್ ಎ.ಜಿ, ಮುಖೇಶ್ ಕೃಷ್ಣ, ಸಮೀಕ್ಷಾ ಎಸ್. ಇವರ ತಂಡ ದೃಶ್ಯಕಲೆ (ಕಲೋತ್ಸವ) ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿದೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀ ರುಕ್ಮಯ್ಯ ಮತ್ತು ಶ್ರೀ ರಂಗಪ್ಪ ತರಬೇತಿ ನೀಡಿದ್ದರು.
