ಎಸ್. ಎಸ್. ಎಲ್. ಸಿ. ವಿಷಯವಾರು ಕಾರ್ಯಾಗಾರ

ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ತಾಲೂಕು ಸಂಯೋಜನೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ವೃದ್ಧಿಗಾಗಿ ಆಂಗ್ಲ ಭಾಷಾ ಶಿಕ್ಷಕರ ಕಾರ್ಯಾಗಾರ ನಡೆಯಿತು. ತಾಲೂಕಿನ ಸರಕಾರಿ/ಅನುದಾನಿತ/ಖಾಸಗಿ ಆಂಗ್ಲ ಭಾಷಾ ಬೋಧನಾ ಶಿಕ್ಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದರು.

ತಾಲೂಕು ನೋಡಲ್ ಅಧಿಕಾರಿಯಾದ ಶ್ರೀಯುತ ಹರಿಪ್ರಸಾದ್ ದೀಪ ಬೆಳಗಿಸಿ ಕಾರ್ಯಾಗಾರ ಉದ್ಘಾಟಿಸಿದರು. ಶಾಲಾ ಸಂಚಾಲಕರಾದ ಶ್ರೀಯುತ ರವಿನಾರಾಯಣ ಸಭಾಧ್ಯಕ್ಷತೆ ವಹಿಸಿ ಜ್ಞಾನಾಭಿವೃದ್ಧಿಯ ದೃಷ್ಟಿಯಿಂದ ಇಂತಹ ಕಾರ್ಯಾಗಾರಗಳ ಪ್ರಸ್ತುತತೆಯನ್ನು ತಿಳಿಸಿದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಸರಕಾರಿ ಪದವಿ ಪೂರ್ವ ಕಾಲೇಜು ಕಾಣಿಯೂರು ಇಲ್ಲಿನ ಅಧ್ಯಾಪಕರಾದ ಜಾರ್ಜ್ ಕೆ.ವಿ. ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ ಇಲ್ಲಿನ ಅಧ್ಯಾಪಕರಾದ ವಿಜಯಕುಮಾರ್, ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ಚಂದ್ರ, ಸದಸ್ಯರಾದ ವಸಂತ ಸುವರ್ಣ ಉಪಸ್ಥಿತರಿದ್ದರು. ಶಿಕ್ಷಕಿ ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

 

Highslide for Wordpress Plugin