ಮಾದಕ ವ್ಯಸನವು ಚಕ್ರವ್ಯೂಹಕ್ಕೆ ಸಿಲುಕಿದಂತೆ – ಶ್ರೀ ರಾಘವೇಂದ್ರ ಪ್ರಸಾದ್ ಬಂಗಾರಡ್ಕ
ಶ್ರೀ ಒಡಿಯೂರು ವಜ್ರಮಾತಾ ಮಹಿಳಾ ಭಜನಾ ಮಂಡಳಿ ಮತ್ತು ಒಡಿಯೂರು ಷಷ್ಯಬ್ಧ ಸಂಭ್ರಮ ಸಮಿತಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಇವರ ಜಂಟಿ ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಫರಿಣಾಮಗಳು ಎಂಬ ವಿಷಯದಡಿಯಲ್ಲಿ ಕಾರ್ಯಕ್ರಮ ನಡೆಯಿತು.

ಪುತ್ತೂರಿನ ವೈದ್ಯರಾದ ಶ್ರೀ ರಾಘವೇಂದ್ರ ಪ್ರಸಾದ್ ಬಂಗಾರಡ್ಕರವರು ಕಾರ್ಯಕ್ರಮದ ವಿಶೇಷ ಅತಿಥಿಯಾಗಿದ್ದು, ಮಾದಕ ವ್ಯಸನಕ್ಕೆ ಬಲಿಯಾದರೆ ಅದು ಚಕ್ರವ್ಯೂಹಕ್ಕೆ ಸಿಲುಕಿದಂತೆ. ಆದ್ದರಿಂದ ನಮ್ಮನ್ನು ನಾವು ಅದಕ್ಕೆ ದಾಸನಾಗದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು. ವೇದಿಕೆಯಲ್ಲಿ ನ್ಯಾಯವಾದಿ ಶ್ರೀಮತಿ ಹರಿಣಾಕ್ಷಿ ಜೆ. ಶೆಟ್ಟಿ, ಶ್ರೀಮತಿ ನಯನ ರೈ, ಶ್ರೀಮತಿ ಸುಮಂಗಳ ಶೆಣೈ, ಶ್ರೀಮತಿ ರಾಜೇಶ್ವರಿ, ಶ್ರೀಮತಿ ರಂಜಿನಿ ಶೆಟ್ಟಿ, ಶ್ರೀ ಪ್ಯಾಭ್ರಿಕ್ ಲೋಬೋ ಹಾಗೂ ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ರೀ ವಸಂತ ಸುವರ್ಣರವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸ್ವಾಗತ ಮತ್ತು ನಿರೂಪಣೆಯನ್ನು ಶಿಕ್ಷಕ ಚಂದ್ರಶೇಖರ ಸುಳ್ಯಪದವು ನೆರವೇರಿಸಿದರು.