ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

                                                               

 

 

ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಆಚರಣೆಯ ಪ್ರಯುಕ್ತ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ವೈಷ್ಣವ ಜನತೋ ಹಾಗೂ ರಘುಪತಿ ರಾಘವ ರಾಜಾರಾಮ ಹಾಡುಗಳನ್ನು ಸಾಮೂಹಿಕವಾಗಿ ಅಭ್ಯಾಸ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಸಹಶಿಕ್ಷಕಿಯಾದ ಶ್ರೀಮತಿ ದಾಕ್ಷಾಯಿಣಿ ಮಾತಾಜಿ ಮಾತನಾಡಿಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನದ ಆದರ್ಶಗಳಲ್ಲಿ ಪ್ರಸ್ತುತ ಸಮಯಕ್ಕೆ ನಾವು ಅಳವಡಿಸಿಕೊಳ್ಳಬಹುದಾದ ಸಂಗತಿಗಳನ್ನು ಉಲ್ಲೇಖಿಸಿದರು. ೧೦ನೇ ತರಗತಿಯ ಮಕ್ಕಳು ಹಾಗೂ ಶಾಲಾ ಸಹ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ದಿನ ಶಾಲೆಯಲ್ಲಿ ಮಕ್ಕಳು ಮತ್ತು ಶಿಕ್ಷಕರಿಂದ ಸ್ವಚ್ಛತೆ ನಡೆಯಿತು.

Highslide for Wordpress Plugin