
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆ ಪುತ್ತೂರು ಇಲ್ಲಿ ನಡೆದ 17ರ ವಯೋಮಾನದ ಬಾಲಕ-ಬಾಲಕಿಯರ ವಲಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶಾಲೆಯ ಬಾಲಕ ಮತ್ತು ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶ್ರೀ ಮನೋಹರ್ ಮತ್ತು ಶಾಲಾ ದೈಹಿಕ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನಿಡಿದ್ದರು.