ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪುತ್ತೂರು ಪುರಸಭೆಯಲ್ಲಿ 6ರಿಂದ 8ನೇ ತರಗತಿಯ ಮಕ್ಕಳಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ‘ನನ್ನ ಮತ ನನ್ನ ಹಕ್ಕು’ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲೆಯ ಲಿಖಿತಾ ಕೆ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅದ್ವಿತ್ ಜಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾನೆ.