ವಿದ್ಯಾಭಾರತಿ ಕರ್ನಾಟಕ ಹಾಗೂ ಶಾರದಾ ವಿದ್ಯಾನಿಕೇತನ ತಲಪಾಡಿ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 22.0.2013 ರಂದು ಶಾರದಾ ವಿದ್ಯಾನಿಕೇತನ ತಲಪಾಡಿ ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕಿಯರ ಕಿಶೋರವರ್ಗದ ಖೋ-ಖೋದಲ್ಲಿ ಮತ್ತು ಬಾಲವರ್ಗದ ಖೋ-ಖೋದಲ್ಲಿ , ಹಾಗೂ ವಿದ್ಯಾಭಾರತಿ ಕರ್ನಾಟಕ ಹಾಗೂ ಷಣ್ಮುಖ ದೇವ ಪ್ರೌಢಶಾಲೆ ಪೆರ್ಲಂಪಾಡಿ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 18.07.2013 ರಂದು ಷಣ್ಮುಖ ದೇವ ಪ್ರೌಢ ಶಾಲೆ, ಪೆರ್ಲಂಪಾಡಿ ಇಲ್ಲಿ ನಡೆದ ಜಿಲ್ಲಾಮಟ್ಟದ 17ರ ವಯೋಮಾನದ ಬಾಲಕಿಯರ ಕಿಶೋರವರ್ಗದ ತ್ರೋಬಾಲ್‌ನಲ್ಲಿ ಮತ್ತು ಕಿಶೋರವರ್ಗದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.