ದಿನಾಂಕ 26.07.2013ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿ ‘ಕಾರ್ಗಿಲ್ ವಿಜಯೋತ್ಸವ ಆಚರಣೆ’ ನಡೆಯಿತು.ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಗಿಲ್ನ ಯುದ್ಧದ ಬಗೆಗೆಗಿನ ಮಹತ್ವವನ್ನು ಮತ್ತು ದೇಶ ಭಕ್ತರನ್ನು ನೆನಪಿಸುವ ಸ್ವಾರಸ್ಯಕರ ವಿಷಯಗಳನ್ನು ಮಕ್ಕಳಿಗೆ ಮನಮುಟ್ಟುವಂತೆ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕರಾದ ಶ್ರೀ ರಾಜೇಶ್ ನೆಲ್ಲಿತ್ತಡ್ಕ ಇವರು ತಿಳಿಸಿದರು.
ನಂತರ ವಿದ್ಯಾರ್ಥಿಗಳಿಗೆ ಕಾರ್ಗಿಲ್ ವಿಜಯೋತ್ಸವದ ಸಾಕ್ಷ್ಯ ಚಿತ್ರಗಳನ್ನು ತೋರಿಸಲಾಯಿತು. ಈ ಕಾರ್ಯಕ್ರಮದ ಸ್ವಾಗತವನ್ನು ಶಿಕ್ಷಕರಾದ ಶ್ರೀ ಚಂದ್ರಶೇಖರ ಹಾಗೂ ವಂದನಾರ್ಪಣೆಯನ್ನು ಶ್ರೀ ರಾಜೇಶ್ ಪಿ.ಬಿ ರವರು ನೆರವೇರಿಸಿದರು.