ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಂಗಳೂರು ಉಪನಿರ್ದೇಶಕರ ಕಚೇರಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕೊಂಬೆಟ್ಟು ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಸಹಯೋಗದಲ್ಲಿ ಕೊಂಬೆಟ್ಟು ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ 2013-14ನೇ ಸಾಲಿನ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ದಿನಾಂಕ 05.09.2013ರಂದು ಹಾಸನದಲ್ಲಿ ನಡೆಯುವ ವಿಭಾಗ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.