ವಿವೇಕಾನಂದ ಕನ್ನಡ ಮಾಧ್ಯಮ ಹಿರಿಯ ವಿದ್ಯಾರ್ಥಿಗಳ ಸಭೆ
ಹಿರಿಯ ವಿದ್ಯಾರ್ಥಿಗಳು ಶಾಲೆಯ ಆಸ್ತಿ, ಶಾಲೆಯ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ. ಕನ್ನಡ ಮಾಧ್ಯಮ ಶಾಲೆ ಎಂದು ಯಾವುದೇ ಕೀಳರಿಮೆ ಬೇಡ ಅಂತೆಯೇ ಬಾಲ್ಯದ ಶಾಲೆಯನ್ನು ಯಾರೂ ಮರೆಯಬಾರದು ಎಂದು ಎಂಡೋ ವಿರೋಧಿ ಹೋರಾಟಗಾರ ಡ.ಮೋಹನ್ ಕುಮಾರ್ ವೈ.ಎಸ್ ಹೇಳಿದರು.

ಅವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನವೆಂಬರ್ 1 ರಂದು ನಡೆದ ಹಿರಿಯ ವಿದ್ಯಾರ್ಥಿಗಳ ಸಭೆಯಲ್ಲಿ ಅತಿಥಿಯಾಗಿ ಆಗಮಿಸಿ ಯುವಜನತೆ ಹಳ್ಳಿ ತೊರೆದು ಪಟ್ಟಣ ವಾಸಿಗಳಾಗುತ್ತಿರುವುದು ವಿಷಾದನೀಯ ಎಂದು ಹೇಳಿದರು.
ಶಾಲಾ ಸಂಚಾಲಕ ರವೀಂದ್ರ ಪಿ. ಹಿರಿಯ ವಿದ್ಯಾರ್ಥಿಗಳು ಶಾಲೆಯೊಂದಿಗೆ ವ್ಯಾವಹಾರಿಕ ಸಂಬಂಧಕ್ಕಿಂತ ಭಾವನಾತ್ಮಕ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲಾಧ್ಯಕ್ಷ ಶ್ರೀ ಕೃಷ್ಣ ಭಟ್ ಕೊಂಕೋಡಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.





ಡಾ.ಮೋಹನ್ ಕುಮಾರ್ ವೈ.ಎಸ್ ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ದೀಪಾವಳಿ ಹಬ್ಬದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಂದ ಅಖಂಡ ಭಾರತ ಜ್ಯೋತಿ ಪ್ರಜ್ವಲನ ಕಾರ್ಯಕ್ರಮ ನಡೆಯಿತು. ಬಳಿಕ 2013-14 ನೇ ಸಾಲಿನ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರಾಗಿ ಅನೀಶ್ ಕೃಷ್ಣ, ಉಪಾಧ್ಯಕ್ಷಯಾಗಿ ಆಶಾ ಪಾರ್ವತಿ, ಕಾರ್ಯದರ್ಶಿಯಾಗಿ ಸಚಿನ್, ಸಹಕಾರ್ಯದರ್ಶಿಯಾಗಿ ಡಾ.ದೀಪಕ್ ಪಿ. ಹಾಗೂ 5 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ಯಾಮ್ ಪ್ರಸಾದ್ ಶಾಸ್ತ್ರೀ, ಶೋಭಾ ಕೊಳತ್ತಾಯ, ಸಂಘದ ನಿಕಟ ಪೂರ್ವ ಅಧಕ್ಷ ಪುನೀತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. 10ನೇ ತರಗತಿ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಂಘದ ನಿಕಟಪೂರ್ವ ಉಪಾಧ್ಯಕ್ಷ ವಿರೂಪಾಕ್ಷ ವಂದಿಸಿದರು.