ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್, ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಯ್ದ ಶಾಲೆಗಳಲ್ಲಿ ಚಾರಿತ್ರಿಕ ಗಿನ್ನೆಸ್ ದಾಖಲೆಗಾಗಿ ಆಯೋಜಿಸಲಾಗಿರುವ ಅಭೂತಪೂರ್ವ ಕಾರ್ಯಕ್ರಮ ‘ಭವಿಷ್ಯತ್ತಿಗಾಗಿ ಯೋಗ’ ದಿನಾಂಕ 13-12-2013 ರಂದು ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆಯಿತು.
