65ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಜನವರಿ 26ರಂದು ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶ್ರೀ ಮಾಧವ ಬಿ.ಕೆ (ಮಾಜಿ ಸೈನಿಕರು) ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಪುತ್ತೂರು ಇವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅದೇ ರೀತಿ ಶ್ರೀಯುತ ವಸಂತ ಸುವರ್ಣ- ಲೇತ್ ಉದ್ಯಮಿ ಸುವರ್ಣ ಇಂಡಸ್ಟ್ರೀಸ್ ಬನ್ನೂರು ಇವರು ಮುಖ್ಯ ಅತಿಥಿಯಾಗಿ ಆಗಮಿಸಿ, ಗಣರಾಜ್ಯೋತ್ಸವದ ಮಹತ್ವದ ಕುರಿತು ಶುಭಸಂದೇಶ ನೀಡಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ವಿವೇಕಾನಂದ ವಿದ್ಯಾಸಂಸ್ಥೆಗಳು ತೆಂಕಿಲ ಇಲ್ಲಿನ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಕೆ.ಎಂ.ಕೃಷ್ಣ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಡಳಿತ ಮಂಡಳಿ ಸದಸ್ಯರು, ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರುಗಳು, ಡಿ.ಎಡ್ ಮತ್ತು ಬಿ.ಎಡ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು, ಪೋಷಕ ಬಂಧುಗಳು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಹಾಗೂ ಎರಡು ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
