ಅಗ್ನಿ ಸುರಕ್ಷತೆ ಕುರಿತು ಪ್ರಾತ್ಯಕ್ಷಿಕೆ, ಜಾಗೃತಿ ಕಾರ್ಯಕ್ರಮ
ಇನ್ನರ್ ವಿಲ್ ಕ್ಲಬ್ ಪುತ್ತೂರು ಇವರ ನೇತೃತ್ವದಲ್ಲಿ ‘ಅಗ್ನಿ ಸುರಕ್ಷತೆ ಕುರಿತು ಪ್ರಾತ್ಯಕ್ಷಿಕೆ ಮತ್ತು ಜಾಗೃತಿ ಕಾರ್ಯಕ್ರಮ’ ವಿವೇಕಾನಂದ ವಿದ್ಯಾಸಂಸ್ಥೆಗಳ ತೆಂಕಿಲ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಗ್ನಿಶಾಮಕ ಠಾಣಾಧಿಕಾರಿ ಶಂಕರ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಇನ್ನರ್ ವೀಲ್ ಅಧ್ಯಕ್ಷೆ ರೂಪಲೇಖ ದೀಪ ಬೆಳಗಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಾವ ರೀತಿ ಅಗ್ನಿ ಅವಘಡ ಸಂಭವಿಸಿದಾಗ ಜಾಗರೂಕರಾಗಬೇಕು. ಯಾವ ರೀತಿ ಪ್ರಾಣ ರಕ್ಷಣೆ ಮಾಡಿಕೊಳ್ಳಬೇಕು.
ಬೆಂಕಿ ನಂದಿಸುವ ವಿವಿಧ ವಿಧಾನಗಳ ಕುರಿತು ಪುತ್ತೂರು ಅಗ್ನಿ ಶಾಮಕ ಠಾಣೆಯ ಪ್ರಮುಖ ಅಧಿಕಾರಿ ರುಕ್ಮಯ ಗೌಡ ಮಾಹಿತಿ ನೀಡಿದರು. ಈ ಜಾಗೃತಿ ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲಮಾಧ್ಯಮ ಮತ್ತು ನರೇಂದ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಉಪಸ್ಥಿತರಿದ್ದರು.