ಕನ್ನಡ ರಾಜ್ಯೋತ್ಸವ ಆಚರಣೆ

                                         
ಶಾಲಾ ‘ಮಹತಿ’ ಕನ್ನಡ ಸಂಘದ ವತಿಯಿಂದ ನವೆಂಬರ್ 1ರಂದು ಕವಿ-ಕಾವ್ಯ-ಯಾನ ಎಂಬ ಶೀರ್ಷಿಕೆಯಡಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಾಲಾ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದವರು ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಶಾಲಾ ಮುಖ್ಯಗುರು ಶ್ರೀಮತಿ ಆಶಾ ಬೆಳ್ಳಾರೆ ಮಾತಾನಾಡಿ ‘ಜೀವನದಲ್ಲಿ ಶಿಸ್ತನ್ನು ಪಾಲಿಸಿಕೊಂಡು ಭಾಷೆಯನ್ನು ಉಳಿಸಿ ಬೆಳೆಸಬೇಕು’ ಎಂದರು. ವಿದ್ಯಾರ್ಥಿಗಳು ನಾಡಗೀತೆ ಹಾಗೂ ಕನ್ನಡ ಗೀತೆಗಳ ಗಾಯನ ಮಾಡಿದರು. ವಿದ್ಯಾರ್ಥಿಗಳೇ ಚಿತ್ರಿಸಲ್ಪಟ್ಟ ಕವಿಗಳ ಚಿತ್ರಗಳನ್ನು ಪ್ರದರ್ಶಿಸುವುದರ ಮೂಲಕ ಅವರಿಗೆ ನುಡಿನಮನ ಸಲ್ಲಿಸಲಾಯಿತು. ಅಂತೆಯೇ ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪರಿಚಯಿಸುವ ಭಾಷಣ, ಕವನ ವಾಚನ, ಗಮಕ ವಾಚನ ಹಾಗೂ ಕನ್ನಡ ನುಡಿಮುತ್ತುಗಳನ್ನು ಪ್ರಸ್ತುತ ಪಡಿಸಿದರು. ವಿದ್ಯಾರ್ಥಿನಿಯರಾದ ಯಶಸ್ವಿ ಸ್ವಾಗತಿಸಿ, ಶ್ರೀನಿಧಿ ವಂದಿಸಿ, ತನಿಷಾ ರೈ ಕಾರ್ಯಕ್ರಮ ನಿರೂಪಿಸಿದರು.

Highslide for Wordpress Plugin