ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ – ರಾಷ್ಟ್ರಮಟ್ಟಕ್ಕೆ(ಎಸ್.ಜಿ.ಎಫ್.ಐ) ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಅಂಬೇಡ್ಕರ್ ಕ್ರೀಡಾಂಗಣ ಬಸವೇಶ್ವರ ನಗರ ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದ ತಂಡದಲ್ಲಿದ್ದ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತರುಣ್ ಕೃಷ್ಣ ರಾಷ್ಟ್ರಮಟ್ಟದ(ಎಸ್.ಜಿ.ಎಫ್.ಐ) ಪಂದ್ಯಾಟಕ್ಕೆ ಆಯ್ಕೆಗೊಂಡಿದ್ದಾನೆ.