ಈಶ ಯೋಗ ಕೇಂದ್ರವು ಮಹಾಶಿವರಾತ್ರಿ ಶಿವಾಂಗ ಸಾಧನದ ಭಾಗವಾಗಿ ಉಡುಪಿಯಿಂದ ಕೊಯಂಬತ್ತೂರಿನ ಈಶ ಯೋಗ ಕೇಂದ್ರಕ್ಕೆ ಆದಿಯೋಗಿ ರಥದ 70ದಿನಗಳ ಶಿವಯಾತೆಯನ್ನು ಹಮ್ಮಿಕೊಂಡಿದೆ. ಈ ಯಾತ್ರೆಯು ಶಾಲೆಯ ಆವರಣಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮಂತ್ರಪಠಣ, ಭಜನೆ, ಡೋಲುವಾದನ, ಶಂಖನಾದದೊಂದಿಗೆ ರಥವನ್ನು ಸ್ವಾಗತಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಮುಖ್ಯಗುರುಗಳು, ಶಿಕ್ಷಕರು, ಶಿಕ್ಷಕೇತರ ವೃಂದದವರು ಮತ್ತು ವಿದ್ಯಾರ್ಥಿಗಳೆಲ್ಲರೂ ಆದಿಯೋಗಿ ರಥಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಆರತಿ ಬೆಳಗಿ ಭಕ್ತಿಯಿಂದ ನಮಿಸಿದರು.