ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ವಿವೇಕ ನಗರ ತೆಂಕಿಲ ಆವರಣದಲ್ಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಹಾಗೂ ಆಂಗ್ಲಮಾಧ್ಯಮ ಶಾಲೆಗಳಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಜರುಗಿತು. ಭಾರತದ ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ 150ರ ಸಂಭ್ರಮಾಚರಣೆಯೊಂದಿಗೆ ವಿದ್ಯಾಸಂಸ್ಥೆಗಳ 3600 ಮಕ್ಕಳು, ಶಿಕ್ಷಕರು, ಆಡಳಿತ ಮಂಡಳಿಯವರು ಸಾಮೂಹಿಕವಾಗಿ ವಂದೇ ಮಾತರಂ ಹಾಗೂ ದೇಶಭಕ್ತಿಗೀತೆಗಳನ್ನು ಹಾಡಿದರು. ಶಾಲಾ ಆವರಣದಲ್ಲಿ ಪಾಳು ಬಿದ್ದಿದ್ದ ಬಾವಿಯನ್ನು ಶುದ್ಧೀಕರಣಗೊಳಿಸುವ ಅದರ ನೀರನ್ನು ಬಳಸುವ ಸಲುವಾಗಿ ಆಯೋಜಿಸಲಾಗಿದ್ದ ಗಂಗಾ ಪೂಜೆಯಂದು ಪುತ್ತೂರು ಹಾಗೂ ಆಸುಪಾಸಿನ ದೇವಸ್ಥಾನ ಹಾಗೂ ಭಜನಾ ಮಂದಿರಗಳಿಂದ ತೀರ್ಥ ತಂದು ಬಾವಿಗೆ ಹಾಕುವಲ್ಲಿ ಸಹಕರಿಸಿದ ಧರ್ಮಾಧಿಕಾರಿಗಳು, ಆಡಳಿತ ಮೊಕ್ತೇಸರರು ಉಪಸ್ಥಿತರಿದ್ದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ ಇವರು ಆಶಯ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಗಳ ಸಂಚಾಲಕರು, ಅಧ್ಯಕ್ಷರು, ಪದಾಧಿಕಾರಿಗಳು, ಪೆÇೀಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.