ಕಾರ್ಗಿಲ್ ವಿಜಯೋತ್ಸವ ಆಚರಣೆ
ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಶಾಲಾ ಸಹಶಿಕ್ಷಕಿ ಕು. ಪ್ರತೀಕ್ಷಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಳಿಕ 5ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಹುತಾತ್ಮರಾದ ವೀರಯೋಧರ ಕುರಿತು ಸ್ವಗತ – ಪರಿಚಯ ಮಾಡಿಕೊಳ್ಳುವ ಮೂಲಕ ಹುತಾತ್ಮರ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸಿದರು. ವಿದ್ಯಾರ್ಥಿಗಳಿಂದ ಕೆಲವು ಹುತಾತ್ಮರಾದ ಹಾಗೂ ನಿವೃತ್ತ ಜೀವನವನ್ನು ಸಾಗಿಸುತ್ತಿರುವ ವೀರಯೋಧರ ಭಾವಚಿತ್ರವನ್ನು ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ನಂತರ ವಿದ್ಯಾರ್ಥಿಗಳು ಬಿಡಿಸಿದ ಭಾವಚಿತ್ರಗಳನ್ನು ಪ್ರದರ್ಶಿಸಲಾಯಿತು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.