ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆ ಸಹಯೋಗದೊಂದಿಗೆ ಕೊಂಬೆಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಶಾಲೆಯ ವಿದ್ಯಾರ್ಥಿಗಳು ಪ್ರೌಢಶಾಲಾ ವಿಭಾಗದ ಬಾಲಕರು ಮತ್ತು ಬಾಲಕಿಯರು ತಂಡ ಪ್ರಶಸ್ತಿ ಮತ್ತು ಸಮಗ್ರ ಪ್ರಶಸ್ತಿ ಪಡೆದಿರುತ್ತಾರೆ. ಇವರಲ್ಲಿ 13 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರಾದ ಶ್ರೀ ದಾಮೋದರ ಬೆಟ್ಟಂಪಾಡಿ, ಶ್ರೀಮತಿ ಹರಿಣಾಕ್ಷಿ ಮತ್ತು ಶ್ರೀ ಕೃಷ್ಣಪ್ರಸಾದ್ ಬೆಟ್ಟಂಪಾಡಿ ಇವರು ತರಬೇತಿ ನೀಡಿರುತ್ತಾರೆ.
