ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ – ಜಿಲ್ಲಾಮಟ್ಟಕ್ಕೆ ಆಯ್ಕೆ


ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ – ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಇವರ ವತಿಯಿಂದ ಪ್ರಗತಿ ಆಂಗ್ಲಮಾಧ್ಯಮ ಶಾಲೆ ಕಾಣಿಯೂರು ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಯೋಗಾಸನ ಸ್ಪಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಧನ್ವಿತ್ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಯೋಗ-ಸಾಂಪ್ರಾದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. 14ರ ವಯೋಮಾನದ ರಿದಮಿಕ್ ಗುಂಪಿನಲ್ಲಿ ಶ್ರೇಯಸ್ ಮತ್ತು ಸಮರ್ಥ್ ದ್ವಿತೀಯ ಸ್ಥಾನ ಮತ್ತು ಸಾಂಪ್ರಾದಾಯಿಕ ವಿಭಾಗದಲ್ಲಿ ಜಿತನ್ –ತೃತೀಯ ಸ್ಥಾನ ಪಡೆದಿರುತ್ತಾನೆ.

Highslide for Wordpress Plugin