ವಂದೇ ಮಾತರಂ ಸಾಮೂಹಿಕ ಗಾಯನ ಕಾರ್ಯಕ್ರಮ

 
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್, ವಿದ್ಯಾಭಾರತಿ ಕರ್ನಾಟಕ ವತಿಯಿಂದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಪ್ರವರ್ತಿತ ವಿದ್ಯಾಸಂಸ್ಥೆಯಾದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿ ‘ನಮಾಮಿ ಭಾರತ’ ಶೀರ್ಷಿಕೆಯಡಿಯಲ್ಲಿ ವಂದೇ ಮಾತರಂ ಸಾಮೂಹಿಕ ಗಾಯನ ನಡೆಯಿತು. ಶಾಲಾ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ ವಂದೇ ಮಾತರಂ ಸಾಮೂಹಿಕ ಗಾಯನ ಕಾರ್ಯಕ್ರಮದ ಉದ್ದೇಶ ಮತ್ತು ಯೋಜನೆಗಳ ಬಗ್ಗೆ ತಿಳಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಮೇಶ್ಚಂದ್ರ ಮತ್ತು ಕೋಶಾಧಿಕಾರಿಗಳಾದ ಶ್ರೀ ಅಶೋಕ್ ಕುಂಬ್ಳೆ ಮತ್ತು ಶಾಲೆಯ 827 ವಿದ್ಯಾರ್ಥಿಗಳು, ಶಿಕ್ಷಕವೃಂದದವರು ಮತ್ತು ಪೆÇೀಷಕವೃಂದದವರು ಉಪಸ್ಥಿತರಿದ್ದರು.

Highslide for Wordpress Plugin