ವಿಘ್ನೇಶ್ ವಿಶ್ವಕರ್ಮ ಪ್ರಜ್ಞಾ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಇವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಸಿದ ಜ್ಞಾನ ಚಂದನ ಮತ್ತು ಜ್ಞಾನ ನಂದನ ಪುಸ್ತಕಾಧಾರಿತ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿಘ್ನೇಶ್ ವಿಶ್ವಕರ್ಮ ಪ್ರೌಢ ಶಾಲಾ ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪ್ರಜ್ಞಾ ಚಿತ್ರಕಲೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ.