ತಾಲೂಕು ಮಟ್ಟದ ಖೋ- ಖೋ – ವಿವೇಕಾನಂದ ಕನ್ನಡ ಮಾಧ್ಯಮದ ಬಾಲಕಿಯರು ಜಿಲ್ಲಾ ಮಟ್ಟಕ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು ಇವರ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು, ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ ಖೋ- ಖೋ ಪಂದ್ಯಾಟದಲ್ಲಿ 17 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ದಾಮೋದರ್ ಮತ್ತು ಶ್ರೀಮತಿ ಹರಿಣಾಕ್ಷಿ ತರಬೇತಿ ನೀಡಿದ್ದರು.

DSCN0959

Highslide for Wordpress Plugin