ನಿರಂತರ ಕಲಿಕೆ ವಿಕಾಸದ ಹಾದಿಯನ್ನು ತೆರೆಯುತ್ತದೆ- ಶಾಲಿನಿ ಶೆಟ್ಟಿ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ 2015-16 ನೇ ಸಾಲಿನಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಗಳಿಸಿದ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

20151126_104412

ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಶಾಲಿನಿ ಶೆಟ್ಟಿ ಇವರು ನೆರವೇರಿಸಿ ಪ್ರತಿಭೆಗಳಿಗೆ ಶುಭ ಹಾರೈಸಿ ನಿರಂತರವಾದ ಕಲಿಕೆ ವಿಕಾಸದ ಹಾದಿಯನ್ನು ತೆರೆಯುವುದರ ಮೂಲಕ ಉತ್ತಮ ಭವಿಷ್ಯ ರೂಪಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಸ್ಪರ್ಧೆಗಳಲ್ಲಿ ನಿರಂತರ ಭಾಗವಹಿಸಿ ಎಂದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರಿಯದರ್ಶಿನಿ ಶಾಲೆ ಬೆಟ್ಟಂಪಾಡಿ ಇಲ್ಲಿನ ಮುಖ್ಯ ಗುರುಗಳಾದ ರಾಜೇಶ್ ನೆಲ್ಲಿತ್ತಡ್ಕ ಮಾತನಾಡಿ ಪ್ರತಿಭೆಗಳು ದೇಶಕ್ಕೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸಿದರು.

ಶಾಲಾ ಹಿರಿಯ ವಿದ್ಯಾರ್ಥಿನಿ ಕು. ಶ್ರೇಯಾ ಕೊಳತ್ತಾಯ ಮಾತನಾಡಿ ತಮ್ಮ ವಿದ್ಯಾರ್ಥಿ ಜೀವನದ ಅನುಭವದ ಪುಟವನ್ನು ಬಿಚ್ಚಿಟ್ಟರು.

ವೇದಿಕೆಯಲ್ಲಿ ಶಾಲಾ ಶಿಕ್ಷಕ -ರಕ್ಷಕ ಸಂಘದ ಸದಸ್ಯರಾದ ಅಂಬಿಕಾ ರಮೇಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅನೀಶ್ ಉಪಸ್ಥಿತರಿದ್ದರು. ಸಹನಾ ಮಾತಾಜಿ ಸ್ವಾಗತಿಸಿ, ಭವ್ಯ ಮಾತಾಜಿ ನಿರೂಪಿಸಿದರು.

Highslide for Wordpress Plugin