ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂರು ವರ್ಷ ತುಂಬಿದ ಸಂಭ್ರಮಾಚರಣೆ ಪ್ರಯುಕ್ತ ವಿವೇಕಾನಂದ ಜಯಂತಿಯಂದು ನಡೆಯುವ ಕಾರ್ಯಕ್ರಮದ ಅಂಗವಾಗಿ ಹೊರಟ ವಿವೇಕ ರಥ ಜ.11 ರಂದು ಮಧ್ಯಾಹ್ನ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣಕ್ಕೆ ಆಗಮಿಸಿತು.

ತೆಂಕಿಲದ ಪ್ರಮುಖ ರಸ್ತೆಯಲ್ಲಿ ಆಗಮಿಸಿದ ರಥವನ್ನು ಮೆರವಣಿಗೆಯಲ್ಲಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂವ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀ ರೋಹಿಣಾಕ್ಷರವರು ಮಾತನಾಡಿ, ಭಾರತೀಯ ಸಂಸ್ಕೃತಿಯೊಂದಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುವುದರೊಂದಿಗೆ ಆರಂಭವಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂರರ ಸಂಭ್ರಮಾಚರಣೆ ಸಡಗರದಿಂದ ಆಚರಿಸುತ್ತಿರುವ ಮಹತ್ವದ ಬಗ್ಗೆ ತಿಳಿಸಿ ಜ.12 ರಂದು ನಡೆಯುವ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ತಿಳಿಸಿದರು.
ರಥಕ್ಕೆ ಪುಷ್ಪಾರ್ಚನೆಯನ್ನು ಮುಖ್ಯಗುರುಗಳಾದ ಶ್ರೀ ಸತೀಶ್ ರೈ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವಿವೇಕಾನಂದ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ನಳಿನಿ ವಾಗ್ಲೆ, ಹಿರಿಯ ಶಿಕ್ಷಕಿ ಕು. ಲೀಲಾವತಿ ಹಂದ್ರಟ್ಟ ಮತ್ತು ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮವನ್ನು ಶ್ರೀ ವಿ.ಜಿ. ಭಟ್ ನೆರವೇರಿಸಿದರು.