ಯಕ್ಷಗಾನ ತರಬೇತಿ ಕಾರ್ಯಾಗಾರದ ಸಮಾರೋಪ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯುತ್ತಿರುವ ಯಕ್ಷಗಾನ ತರಬೇತಿ ಕಾರ್ಯಾಗಾರವು ದಿನಾಂಕ 7-4-2016 ರಂದು ಸಮಾರೋಪಗೊಂಡಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನಾಟ್ಯಗುರು ಶ್ರೀ ಬಾಲಕೃಷ್ಣ ಉಡ್ಡಂಗಳರವರು ಮಾತನಾಡಿ, ನಿರಂತರ ಕಲಿಕೆಯಿಂದ ಮಾತ್ರ ಕಲೆಯನ್ನು ಒಲಿಸಿಕೊಳ್ಳು ಸಾಧ್ಯ ಎಂದು ತಿಳಿಸಿದರು. ವೇದಿಕೆಯಲ್ಲಿ ಪೋಷಕರಾದ ಶ್ರೀ ಬಾಲಕೃಷ್ಣ ಭಟ್ ಉಪಸ್ಥಿತರಿದ್ದು ಶುಭಹಾರೈಸಿದರು. ಶಿಬಿರಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು. ಸ್ವಾಗತ ಮತ್ತು ಪ್ರಸ್ತಾವಿಕವಾಗಿ ಕಾರ್ಯಾಗಾರದ ನಿರ್ದೇಶಕರಾದ ಶ್ರೀ ಚಂದ್ರಶೇಖರವರು ಮಾತನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕ ಶ್ರೀ ಹರೀಶ್ ನೆರವೇರಿಸಿದ್ದರು.

20160407_114931

20160407_123316

Highslide for Wordpress Plugin