ಮಕ್ಕಳಲ್ಲಿ ಸ್ವಸಾಮರ್ಥ್ಯ ಬೆಳೆಸಬೇಕು -ರಾಮಚಂದ್ರ ಭಟ್

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯುವ ಪೋಷಕರ ಸಭೆಯು ಮಕ್ಕಳ ವೈಯಕ್ತಿಕ ಸಾಮರ್ಥ್ಯ ಬೆಳೆಸುವಲ್ಲಿ ಸಹಕಾರಿಯಾಗಿದೆ, ಎಂದು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದಂತಹ ಇಂಗ್ಲಿಷ್ ಉಪನ್ಯಾಸಕರಾದ ಶ್ರೀ ರಾಮಚಂದ್ರ ಭಟ್ ಇವರು ವಿದ್ಯಾರ್ಥಿಗಳಲ್ಲಿ ಸ್ವಸಾಮರ್ಥ್ಯ ಬೆಳೆಸಬೇಕು. ಹಾಗೆಯೇ ಅಂತರ್ಜಾಲ ಸಂಪರ್ಕ ಹೊಂದಿರುವ ಮೊಬೈಲ್‌ನಂತಹ ಮಾಧ್ಯಮಗಳ ಬಳಕೆಯ ದುಷ್ಪರಿಣಾಮದ ಬಗ್ಗೆ ಸದಾ ಎಚ್ಚರವಿರುವಂತೆ ಕರೆ ನೀಡುತ್ತಾ 9ನೇ ತರಗತಿಯ ಪೋಷಕರ ಜವಾಬ್ದಾರಿಗಳ ಬಗ್ಗೆ ಸಂವಾದ ನಡೆಸಿದರು.

ಸಭೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಕೃಷ್ಣ ಭಟ್ ಕೊಂಕೋಡಿ, ಸದಸ್ಯೆ ಶ್ರೀಮತಿ ರೂಪಲೇಖ, ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ, ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶ್ರೀಮತಿ ಸಹನಾ ಮಾತಾಜಿ ಪ್ರಾರ್ಥಿಸಿ, ಶ್ರೀಮತಿ ಪೂರ್ಣಿಮಾ ಮಾತಾಜಿ ಕಾರ್ಯಕ್ರಮ ಪ್ರಸ್ತುತ ಪಡಿಸಿದರು.

20160622_161336

20160622_161425

20160622_161406

Highslide for Wordpress Plugin