ಪ್ರತಿಭಾಕಾರಂಜಿ-ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ

Agamyaದಕ್ಷಿಣಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಇದರ ಸಹಯೋಗದಲ್ಲಿ ಸರ್ಕಾರಿ ಪದವಿ ಪೂರ್ವಕಾಲೇಜು ಕಾವಳಪಡೂರು ವಗ್ಗ, ಬಂಟ್ವಾಳ ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಕು. ಅಗಮ್ಯ ಕಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಬನ್ನೂರು ಗಣೇಶ್ ಆಚಾರ್ಯ ಮತ್ತು ಮಂಜುಳ ಗಣೇಶ್ ದಂಪತಿಗಳ ಪುತ್ರಿ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀ ರುಕ್ಮಯ್ಯ ಇವರು ತರಬೇತಿ ನೀಡಿರುತ್ತಾರೆ.

Highslide for Wordpress Plugin