ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ
ಮಂಗಳೂರಿನ ಕದ್ರಿ ಬಾಲಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಕಲಾಶ್ರೀ ಆಯ್ಕೆ ಪ್ರಕ್ರಿಯೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಮ್ ಪ್ರಸಾದ್ (ಕೆ.ಮಲ್ಲೇಶ್ ಕುಮಾರ್ ಮತ್ತು ಅನುರಾಧ ಕೆ ದಂಪತಿಗಳ ಪುತ್ರ) ಸೃಜನಾತ್ಮಕ ಕಲಾ ವಿಭಾಗದಲ್ಲಿ ಪ್ರಶಸ್ತಿ ಪಡೆದು ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.